News Karnataka Kannada
Sunday, April 28 2024
ಮುಂಬೈ

ಶ್ರೀ ಕೆ. ವಾಸುದೇವಾಚಾರ್ಯ ದತ್ತಿ ಪುರಸ್ಕಾರಕ್ಕೆ ಅನಿತಾ ಪಿ. ತಾಕೊಡೆಯವ ಸಂಕಲನ ಆಯ್ಕೆ

Anita
Photo Credit : News Kannada

ಮುಂಬೈ: ಕನ್ನಡ ಸಾಹಿತ್ಯ ಪರಿಷತ್ತು ಎರ್ಪಡಿಸಿದ 2022ನೆಯ ಸಾಲಿನ ಶ್ರೀ ಕೆ. ವಾಸುದೇವಾಚಾರ್ಯ ದತ್ತಿ ಪುರಸ್ಕಾರಕ್ಕೆ ಅನಿತಾ ಪಿ. ತಾಕೊಡೆಯವರ ‘ನಿವಾಳಿಸಿ ಬಿಟ್ಟ ಕೋಳಿ ಕಥಾ ಸಂಕಲನ’ ಆಯ್ಕೆಯಾಗಿದೆ.

2022ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟವಾದ ಕೃತಿಗಳನ್ನು ಒಟ್ಟು 51 ದತ್ತಿಗಳ 57 ಪ್ರಶಸ್ತಿಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. ಇದಕ್ಕೆ ರಾಜ್ಯ ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು ಅವುಗಳಲ್ಲಿ 25 ಜನ ಪರಿಣಿತರ ಸಮಿತಿ ಪ್ರಾಥಮಿಕವಾಗಿ ಆಯ್ಕೆ ಮಾಡಿತ್ತು. ನಾಡೋಜ ಡಾ.ಮಹೇಶ ಜೋಶಿಯವರ ನೇತೃತ್ವದ ಸಮಿತಿ ಪಾರದರ್ಶಕವಾಗಿ ಕೆಳಕಂಡ ಅಂತಿಮ ಪಟ್ಟಿಯನ್ನು ಆಯ್ಕೆ ಮಾಡಿದ್ದು ಶೀಘ್ರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ. ಅನಿತಾ ಅವರು ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು 2019ರಲ್ಲಿ ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು