ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸ ಎದುರು ಇಂದು (ಏಪ್ರಿಲ್ 14) ನಡೆದ ಗುಂಡಿನ ದಾಳಿಗೆ ಸಂಬಂಧಪಟ್ಟಂತೆ ಮಹತ್ವದ ಸುಳಿವು ಸಿಕ್ಕಿದ್ದು,ಬೈಕ್ನಲ್ಲಿ ಬಂದು ಗುಂಡು ಹಾರಿಸಿದ ಇಬ್ಬರು ಶೂಟರ್ಗಳ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ದಾಳಿ ನಡೆದ ಕೆಲವೇ ಗಂಟೆಗಳಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ದಾಳಿಯ ಹೊಣೆ ಹೊತ್ತುಕೊಂಡಿದ್ದ. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದ.
ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯದಲ್ಲಿ ಇಬ್ಬರೂ ಕ್ಯಾಪ್ ಧರಿಸಿರುವುದು ಕಂಡು ಬಂದಿದೆ. ಆ ಪೈಕಿ ಓರ್ವ ಬಿಳಿ ಟೀ ಶರ್ಟ್, ಕಪ್ಪು ಜಾಕೆಟ್ ಮತ್ತು ಜೀನ್ಸ್ ಧರಿಸಿದ್ದರೆ, ಇನ್ನೋರ್ವ ಕೆಂಪು ಟೀ ಶರ್ಟ್ ಮತ್ತು ಜೀನ್ಸ್ ಧರಸಿದ್ದಾನೆ. ಬೈಕ್ನಲ್ಲಿ ಬಂದ ಇವರು ಸಲ್ಮಾನ್ ಮನೆ ಎದುರು ಶೂಟ್ ಮಾಡುತ್ತಿರುವುದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
#WATCH | Maharashtra: Visuals from outside actor Salman Khan's residence in Bandra where two unidentified men opened fire today morning.
(CCTV video confirmed by Mumbai Police) https://t.co/8adLwJ3mXI pic.twitter.com/B6H8qM61R2
— ANI (@ANI) April 14, 2024