Categories: ಯುಎಇ

ಸೌದಿಯಲ್ಲಿ ಮೃತಪಟ್ಟ ಕೊಪ್ಪ ಮೂಲದ ಯುವಕನ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ನೆರವು

ರಿಯಾದ್: ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಕರ್ನಾಟಕದ ಕೊಪ್ಪ ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ರಿಯಾದ್ ನೆರವಾಗಿದೆ.

ಸುಮಾರು 8 ವರ್ಷಗಳಿಂದ ರಿಯಾದಿನಲ್ಲಿರುವ ಖಾಸಗಿ ಕಂಪೆನಿಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ 30 ವರ್ಷ ಪ್ರಾಯದ ಮೊಮಿನ್ ಮುಮ್ತಾಝ್ ಎಂಬವರು ಫೆಬ್ರವರಿ 02 ಬುಧವಾರದಂದು ತನ್ನ ಕಾರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.ಆಸ್ಪತ್ರೆಯಲ್ಲಿರುವ ಮೃತದೇಹದ ಅಂತ್ಯಕ್ರಿಯೆ ನೆರವೇರಿಸುವ ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರಾದ ನೂರ್ ಅಹ್ಮದ್ ಹುಸೈನ್ ಅಬ್ದುಲ್ ರಹಮಾನ್ ರವರು ಇಂಡಿಯನ್
ಸೋಶಿಯಲ್ ಫೋರಂನ ಸದಸ್ಯರನ್ನು ನೆರವಿಗಾಗಿ ಸಂಪರ್ಕಿಸಿದ್ದರು.

ಇಂಡಿಯನ್ ಸೋಶಿಯಲ್ ಫೋರಂನ ನಿಝಾಮ್ ಬಜ್ಪೆರವರ ನೇತೃತ್ವದ ತಂಡವು ತಕ್ಷಣವೇ ಸ್ಪಂದಿಸಿ ಸೌದಿ ಅರೇಬಿಯಾದ ಕಾನೂನಿನಂತೆ ಸ್ಥಳೀಯ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಮೊಮಿನ್ ಮುಮ್ತಾಝ್ ರ ಮರಣವು ಸಹಜ ಮರಣವೆಂದು ದೃಢೀಕರಣ ಪತ್ರ ಪಡೆಯಲಾಯಿತು. ಬಳಿಕ ಮೃತದೇಹವನ್ನು ಪಡೆಯುಲು ರಿಯಾದಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಊರಿನಲ್ಲಿರುವ ಮೃತರ ಸಂಬಂಧಿಗಳನ್ನು ಸಂಪರ್ಕಿಸಿ ನೂರ್ ಅಹ್ಮದ್ ಹುಸೈನ್ ಅಬ್ದುಲ್
ರಹಮಾನ್ ರವರ ಹೆಸರಿನಲ್ಲಿ ಅಧಿಕಾರ ಪತ್ರವನ್ನು ಭಾರತೀಯ ರಾಯಭಾರ ಕಚೇರಿಯ ಮೂಲಕ ಪಡೆದು, ಅಂತಿಮವಾಗಿ ಮೃತದೇಹವನ್ನು ಆಸ್ಪತ್ರೆಯಿಂದ ಪಡೆಯಲಾಯಿತು.

Swathi MG

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

12 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

28 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

47 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

51 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago