Categories: ಯುಎಇ

ಭಾರತೀಯ ಬಿಶಪ್ಪರ ಮಹಾಮಂಡಳದಿಂದ ಮೈಕಲ್ ಡಿ’ಸೊಜಾ ದಂಪತಿಗೆ ಸನ್ಮಾನ

ಬೆಂಗಳೂರು: ನಗರದ ಸೇಂಯ್ಟ್ ಜಾನ್ಸ್ ನ್ಯಾಶನಲ್ ಅಕಾಡೆಮಿ ಒಫ್ ಹೆಲ್ತ್ ಸೈನ್ಸ್ ಸಭಾಂಗಣದಲ್ಲಿ, ಭಾರತೀಯ ಬಿಶಪ್ಪರ ಮಹಾಮಂಡಳದ – ಕಥೊಲಿಕ್ ಕನೆಕ್ಟ್ ಮೊಬೈಲ್ ಅಪ್ಲಿಕೇಶನ್ ಲೊಕಾರ್ಪಣೆಯ ಸಂದರ್ಭದಲ್ಲಿ, ಭಾರತದ ಧರ್ಮಸಭೆ ಮತ್ತು ಧರ್ಮಸಭೆಯ ಸಂಸ್ಥೆಗಳಿಗೆ ನೀಡಿದ ಅಪಾರ ಕೊಡುಗೆಗಾಗಿ ಮತ್ತು ಸಹಾಯಹಸ್ತದ ನಿರೀಕ್ಷೆಯಲ್ಲಿರುವ ಜನರ ಅಗತ್ಯಗಳಿಗೆ ಸ್ಪಂದಿಸುವುದನ್ನು ತಮ್ಮ ಬದುಕಿನ ಭಾಗವನ್ನಾಗಿ ರೂಡಿಸಿಕೊಂಡಿರುವ ಅನಿವಾಸಿ ಭಾರತೀಯ ಉದ್ಯಮಿ ಮತ್ತು ಮಹಾದಾನಿ ಮೈಕಲ್ ಡಿ ಸೊಜಾ ಮತ್ತು ಫ್ಲಾವಿಯಾ ಡಿ ಸೊಜಾ ಇವರನ್ನು  ಭಾರತದ ಎಲ್ಲಾ ಬಿಶಪ್ಪರ ಪರವಾಗಿ ಸನ್ಮಾನ ಮಾಡಲಾಯಿತು.

ಡಿ’ಸೋಜಾ ದಂಪತಿಗೆ ಭಾರತೀಯ ಬಿಶಪ್ಪರ ಮಹಾಮಂಡಳದ  ಅಧ್ಯಕ್ಷ ಕಾರ್ಡಿನಲ್ ಪಿಲಿಫ್ ನೇರಿ ಫೆರಾವೊ ಇವರು ಮುಂಬಯಿ ಕಾರ್ಡಿನಲ್ ಓಸ್ವಲ್ಡ್ ಗ್ರ‍ೇಶಿಯಸ್, ಹೈದರಾಬಾದ್ ಕಾರ್ಡಿನಲ್ ಅಂತೋನಿ ಪೂಲಾ, ಮದ್ರಾಸ್ ಮಯ್ಲಾಪುರ್ ಮಹಾಧರ್ಮಾಧ್ಯಕ್ಷ ಜಾರ್ಜ್ ಅಂತೋಣಿ ಸ್ವಾಮಿ, ದೆಹಲಿಯ ಮಹಾದರ್ಮಾಧ್ಯಕ್ಷ ಅಂತೋಣಿ ಕುಟೋ, ಬೆಂಗಳೂರಿನ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೋ ಇವರ ಸಮ್ಮುಖದಲ್ಲಿ ಸನ್ಮಾನ ಮಾಡಿದರು.

ಈ ವೇಳೆ ಸ್ಥಳೀಯ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ| ಜೆರಾಲ್ದ್ ಐಸಾಕ್ ಲೋಬೊ, ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ|ಪೀಟರ್ ಪಾವ್ಲ್ ಸಲ್ಡಾನ್ಹಾ ಉಪಸ್ಥಿತರಿದ್ದರು.

ಮೈಕಲ್ ಡಿಸೊಜಾ ಅವರು ಮೂಲತಃ ದಕ್ಷಿಣ ಕನ್ನಡದ ಪುತ್ತೂರಿನವರು, ಇವರು ತಮ್ಮ ತಂದೆಯಿಂದ ಪ್ರೇರೇಪಿತರಾಗಿ, ಪೂತ್ತೂರಿನಲ್ಲಿ ಸೋಜಾ ಮೆಟಲ್ ಮಾರ್ಟ್ ಸಂಸ್ಥೆಯಿಂದ ಉದ್ಯಮ ಆರಂಭಿಸಿ, ಮಂಗಳೂರಿನಲ್ಲಿ ಸೋಜಾ ಇಲೆಕ್ಟ್ರೋನಿಕ್ಸ್ ಎಂಬ ಸಂಸ್ಥೆಗೆ ವಿಸ್ತರಿಸಿ, ಅಲ್ಲಿಂದ ದುಬಾಯ್‌ಗೆ ಪ್ರಯಾಣ ಬೆಳೆಸಿ ಪ್ರಸ್ತುತ ಅಬುದಾಬಿಯಲ್ಲಿ ಉದ್ಯಮಿಯಾಗಿದ್ದಾರೆ. ಎಚ್.ಎ.ಎಸ್ ಹಾಸ್ಪಿಟಾಲಿಟಿ ಎಂಬ ಉದ್ಯಮ ಸಂಸ್ಥೆ ಕಟ್ಟಿ ದುಬಾಯಾದ್ಯಂತ ಡ್ಯೂನ್ಸ್ ಮತ್ತು ಐವರಿ ಗ್ರಾಂಡ್ ಎಂಬ ಹೆಸರಿನ ಹೋಟೆಲ್ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದ್ದು, ಅವರ ಸಂಸ್ಥೆಗಳಲ್ಲಿ ಸಾವಿರಾರು ಮಂದಿ ಜೀವನ ಸಾಗಿಸುತ್ತಿದ್ದಾರೆ.

ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಐಎಎಸ್, ಐಪಿಎಸ್ ಮತ್ತಿತರ ಸರಕಾರಿ ಅಧಿಕಾರಿಗಳಾಗಬೇಕೆಂಬ ಉದ್ದೇಶದಿಂದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಸಿವಿಲ್ ಸರ್ವಿಸ್ ಅಕಾಡೆಮಿಯನ್ನು ಪ್ರಾರಂಭಿಸಿದ್ದಾರೆ.

ಮಂಗಳೂರು ಧರ್ಮಕ್ಷೇತ್ರದಲ್ಲಿ ಸಿ.ಒ.ಡಿ.ಪಿ. ಸಂಸ್ಥೆಯ ಮೂಲಕ 25 ಕೋಟಿ ರೂಪಾಯಿ ಎಡುಕೇರ್ ವಿದ್ಯಾನಿಧಿಯನ್ನು ಸ್ಥಾಪಿಸಲಾಗಿದ್ದು, 2013 ರಿಂದ ಈ ತನಕ ಸುಮಾರು 3,500 ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಸಮಾಜದ ಅಶಕ್ತ ವರ್ಗದವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ 10 ಕೋಟಿ ರುಪಾಯಿ ನಿಧಿ ಸ್ಥಾಪಿಸಿ ಸ್ವ – ಸಹಾಯ ಗುಂಪುಗಳಿಗೆ ನೀಡಲಾಗಿದೆ. ಸುಮಾರು 10,000 ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದೆ.

ಕೊಂಕಣಿ ಭಾಷೆ – ಸಾಹಿತ್ಯ – ಕಲೆಗಾಗಿ ಮಹತ್ವಾಕಾಂಕ್ಷಿ ‘ವಿಶನ್ ಕೊಂಕಣಿ’ ಕಾರ್ಯಕ್ರಮದ ಮೂಲಕ ಉತ್ತಮ ಗುಣಮಟ್ಟದ 100 ಪುಸ್ತಕಗಳನ್ನು  ಪ್ರಕಟಿಸಲು ಪುಸ್ತಕ ಪ್ರಾಧಿಕಾರ ಸ್ಥಾಪಿಸಿ ರೂಪಾಯಿ  40 ಲಕ್ಷ, ಕೊಂಕಣಿ ಸಿನೇಮಾ ನಿರ್ಮಾಣಕ್ಕೆ 25 ಲಕ್ಷ ಮತ್ತು 25 ಕೊಂಕಣಿ ಹಾಡುಗಳ ನಿರ್ಮಾಣಕ್ಕೆ 10 ಲಕ್ಷ ನಿಧಿಯನ್ನು ಮೀಸಲಿಟ್ಟಿದ್ದಾರೆ.

ಇತ್ತೀಚೆಗೆ ಫಾ। ಮುಲ್ಲರ್ ಆಸ್ಪತ್ರೆಯಲ್ಲಿ ೫೦ ಕೋಟಿ ರೂಪಾಯಿ ವೆಚ್ಚದಲ್ಲಿ ಸಮಾಜದ ಅಶಕ್ತ ವರ್ಗದವರಿಗೂ ಉತ್ತಮ ಚಿಕಿತ್ಸೆ ಕೈಗೆಟುಕುವ ದರದಲ್ಲಿ ಲಭ್ಯವಾಗಬೇಕೆಂಬ ಒತ್ತಾಸೆಯಿಂದ ವಿಶೇಷ ಕಟ್ಟಡ  ಸಂಕೀರ್ಣ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಕೆಳ ಮತ್ತು ಮದ್ಯಮ ವರ್ಗದ ಜನರಿಗೆ, ಅದರಲ್ಲೂ ಕೊಂಕಣಿ ಸಾಹಿತಿ ಮತ್ತು ಕಲಾವಿದರಿಗೆ    ರಿಯಾಯತಿ ದರದಲ್ಲಿ ಚಿಕಿತ್ಸೆಗಾಗಿ  ಒಡಂಬಡಿಕೆಯನ್ನು ಮಾಡಿಕೊಳ್ಳುವ ಮಹಾನ್ ಕಾರ್ಯ ಮಾಡಿದ್ದಾರೆ.

ಸಾಹಿತ್ಯ, ಕಲೆಗೆ ಸದಾ ಸದಾ ಪ್ರೋತ್ಸಾಹ ನೀಡುತ್ತಲೇ ಬಂದಿರುವ ಸೋಜಾ ದಂಪತಿ, ಬಡಜನರ ವಸತಿಗೆ, ಶಿಕ್ಷಣ ಸಂಸ್ಥೆಗಳಿಗೆ, ಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು – ಸದಾ ನೆರವಿನ ಹಸ್ತ ನೀಡುತ್ತಾ ಬಂದಿದ್ದು, ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂರ್ತ್ಯಗಳ ಧರ್ಮಕೇಂದ್ರಗಳಿಗೆ ಬೃಹತ್ ಮೊತ್ತದ ದೇಣಿಗೆಯನ್ನು ನೀಡುತ್ತಲೇ ಬಂದಿದ್ದಾರೆ. ಇತ್ತೀಚೆಗೆ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ  ನಿವಾಸದ  ಯೋಜನೆಗೂ ಅಡಿಪಾಯ ಹಾಕಿದ್ದಾರೆ.

ದೇಶ ವಿದೇಶಗಳಲ್ಲಿ ನಡೆಯುವ ಕೊಂಕಣಿ ಭಾಷೆ, ಸಾಹಿತ್ಯ, ಸಂಗೀತ ಮತ್ತು ನಾಟಕ ಕಾರ್ಯಕ್ರಮಗಳಿಗೆ ದೊಡ್ಡ  ಮೊತ್ತದ ದೇಣಿಗೆಯನ್ನು ನೀಡಿ ಪ್ರೋತ್ಸಾಹಿಸುತ್ತಾ ಬಂದಿರುವುದಲ್ಲದೇ, 2023 ನವೆಂಬರ್ ನಲ್ಲಿ ಮಂಗಳೂರಿನ  ವಿಶ್ವ ಕೊಂಕಣಿ ಕೇಂದ್ರದಲ್ಕ್ಲಿ ನಡೆದ 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಮ್ಮೇಳನದ ಯಶಸ್ಸಿಗೆ ಕಾರಣೀಕರ್ತರಾಗಿದ್ದಾರೆ.

ಸ್ವ ಉದ್ಯಮ ಸ್ಥಾಪಿಸಲು ಬಯಸುವ ಸಮಾಜ ಭಾಂದವರಿಗೆ, ಪ್ರತ್ಯೇಕವಾಗಿ ಯುವಜನತೆಗೆ ಬಂಡವಾಳದ ಮೂಲಕ ಸಹಾಯಹಸ್ತ ನೀಡುತ್ತಲೇ ಬಂದಿರುವ ಮಹಾನ್ ದಾನಿ ಇವರು. ಸದ್ಯ ಡಿ’ಸೊಜಾ ದಂಪತಿ ಅಬುದಾಬಿಯಲ್ಲಿ ನೆಲೆಸಿದ್ದಾರೆ.

Gayathri SG

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

6 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

18 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

19 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

44 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 hour ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago