ಲಖನೌ: ಉತ್ತರ ಪ್ರದೇಶದ ಬುಲಂದ್ಶಹರ್‌ನ ಸೆಲಾಂಪುರ್‌ನಲ್ಲಿ ಇಂದು (ಆಗಸ್ಟ್ 18) ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಮತ್ತು ಟೆಂಪೊ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದಲ್ಲಿ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಅಪಘಾತದಿಂದ ಕುಪಿತರಾದ ಸ್ಥಳೀಯರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಯಾಣಿಕರನ್ನು ಹೊತ್ತ ಖಾಸಗಿ ಬಸ್ ಭಾನುವಾರ ಬೆಳಿಗ್ಗೆ ಶಿಕಾರ್ಪುರ್‌ಗೆ ತೆರಳುತ್ತಿತ್ತು. ಮೀರತ್-ಬದೌನ್ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಟೆಂಪೊಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬುಲಂದ್ಶಹರ್ ಡಿಎಂ ಚಂದ್ರ ಪ್ರಕಾಶ್ ಸಿಂಗ್ ಅವರು, “ಖಾಸಗಿ ಬಸ್ ಮತ್ತು ಟೆಂಪೊ ನಡುವೆ ಡಿಕ್ಕಿಯಿಂದಾಗಿ ಸಂಭವಿಸಿ 10 ಮಂದಿ ಮೃತಪಟ್ಟಿದ್ದಾರೆʼʼ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.