ಕೋಲ್ಕತಾ: ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಮೇಘಲ್ಯದಲ್ಲಿ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಹನ್ನೊಂದು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ಭಾನುವಾರ(ಆಗಸ್ಟ್ 11) ತಿಳಿಸಿದೆ. ಬಂಧಿತರ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.
ಬಿಎಸ್‌ಎಫ್ ಪರಸ್ಪರ ಸಮಸ್ಯೆಗಳನ್ನು ಪರಿಹರಿಸಲು, ವಿಶೇಷವಾಗಿ ಭಾರತೀಯ ಪ್ರಜೆಗಳು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಜನರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಬಿಜಿಬಿ ಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Ad