ನವದೆಹಲಿ: ಲೋಕಸಭಾ ಚುನಾವಣೆ ಯ ಬಳಿಕ ನಡೆದ ಉಪಚುನಾವಣೆಯ ಫಲಿತಾಂಶ ಇಂದು (ಜುಲೈ 13) ಹೊರ ಬೀಳಲಿದ್ದು, ಕುತೂಹಲ ಮೂಡಿಸಿದೆ. ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆದಿತ್ತು.
ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯ ಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಉಪಚುನಾವಣೆ ನಡೆದಿತ್ತು.
ಪಶ್ಚಿಮ ಬಂಗಾಳದ ರಾಯ್‌ಗಂಜ್, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್, ಪಂಜಾಬ್‌ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಘರ್, ಬಿಹಾರದ ರುಪೌಲಿ, ಮಧ್ಯಪ್ರದೇಶದ ಅಮರ್ವಾರಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ.

