Bengaluru 29°C
Ad

ಟ್ರ್ಯಾಕ್ಟರ್​ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಸಾವು 

ಮಧ್ಯಪ್ರದೇಶದ ರಾಜ್​ಗಢದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತಪಟ್ಟಿರುವ ಘಟನೆ  ನಡೆದಿದೆ.

ಮಧ್ಯಪ್ರದೇಶ: ಮಧ್ಯಪ್ರದೇಶದ ರಾಜ್​ಗಢದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತಪಟ್ಟಿರುವ ಘಟನೆ  ನಡೆದಿದೆ.

ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.

ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿರುವುದರಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇಲ್ಲ.

40 ರಿಂದ 50 ಜನರೊಂದಿಗೆ ಮದುವೆ ಮೆರವಣಿಗೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಮೋತಿಪುರದಿಂದ ರಾಜ್‌ಗಢದ ಕುಮಾಲ್‌ಪುರಕ್ಕೆ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಬರುತ್ತಿತ್ತು. ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ವಿವಾಹ ಕಾರ್ಯಕ್ರಮಕ್ಕೆ ಹೋಗಿದ್ದವರು ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ನಂತರ, ಜನರು ಅದರ ಅಡಿಯಲ್ಲಿ ಸಿಲುಕಿದ್ದರು, ತಡರಾತ್ರಿಯವರೆಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಹೊರತೆಗೆಯಲಾಯಿತು.

ಚಾಲಕ ಪಾನಮತ್ತನಾಗಿದ್ದ ಮತ್ತು ಟ್ರಾಲಿ ಓವರ್‌ಲೋಡ್ ಆಗಿದ್ದರಿಂದ ಘಟನೆ ಸಂಭವಿಸಿದೆ.

Ad
Ad
Nk Channel Final 21 09 2023
Ad