ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿ 15 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.
Ad
ಶಿವಖೋಡಿಗೆ ತೆರಳುತ್ತಿದ್ದ ಬಸ್ ಅಖ್ನೂರ್ ನ ತುಂಗಿ ಮೋರ್ ಎಂಬಲ್ಲಿ ರಸ್ತೆಯಿಂದ ಜಾರಿ ಸುಮಾರು 150 ಅಡಿ ಆಳದ ಕಂದಕಕ್ಕೆ ಬಿದ್ದಿದೆ.
Ad
ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರಿದ್ದು, 9 ಮಂದಿ ಮೃತಪಟ್ಟರೆ, 30 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲವು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Ad
ಬಸ್ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Ad
Ad