ನವದೆಹಲಿ: ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ.
ಮುಂದಿನ ಆದೇಶದವರೆಗೆ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಚ್ಚಿರಲಾಗುತ್ತದೆ ದೆಹಲಿ ಮೆಟ್ರೋ ರೈಲು ನಿಗಮ ತಿಳಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ರಾಜೀವ್ ಚೌಕ್, ಮಂಡಿ ಹೌಸ್ ಮತ್ತು ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣಗಳಲ್ಲಿ ಬೇರೆ ಲೈನ್‌ಗಳಿಗೆ ಮಾರ್ಗ ಬದಲಾಯಿಸುವ ಸೌಲಭ್ಯವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.
ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಸಿಜೆಪಿ ಜುಲೈ 20ರಂದು ಹಮ್ಮಿಕೊಂಡಿದ್ದ ‘ಸಂಸದ್ ಚಲೋ’ ಮೆರವಣಿಗೆಗೆ ಸಾವಿರಾರು ಜನರು ದೆಹಲಿಯಲ್ಲಿ ಜಮಾಯಿಸಿದ್ದರಿಂದ, ಸೋಮವಾರವೂ ಸಹ ಮುನ್ನೆಚ್ಚರಿಕೆಯಾಗಿ ಹಲವು ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿತ್ತು.

