ತ್ತೀಸ್‌ಗಢ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವಾ ಐಇಡಿ ಸ್ಫೋಟಗೊಂಡು ಇಬ್ಬರು ಯೋಧರು ಹುತಾತ್ಮರಾಗಿದ್ದು ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುವ ವೇಳೆ ಐಇಡಿ ಸ್ಪೋಟಗೊಂಡಿದ್ದು ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ಅವರು ಮೃತಪಟ್ಟಿದ್ದಾರೆ.

ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡ ಯೋಧರಾಗಿದ್ದು ಪ್ರಸ್ತುತ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ರಾಯ್‌ಪುರಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ.