ಅಮೇರಿಕಾ:  ಪಶ್ಚಿಮ ಪೆನ್ಸಿಲ್ವೇನಿಯಾದಲ್ಲಿ ಟ್ರಂಪ್‌ ನೇತೃತ್ವದಲ್ಲಿ ಶನಿವಾರ ನಡೆಯುತ್ತಿದ್ದ ರ‍್ಯಾಲಿಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಪತ್ತೆ ಹಚ್ಚಿದ್ದು, ಆತ 20 ವರ್ಷದ ಹುಡುಗ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ತಿಳಿಸಿದೆ. ಈತನ ಹೆಸರು ಥಾಮಸ್ ಮ್ಯಾಥ್ಯೂ ಕ್ರೂಕ್ಸ್ .

ಈ 20 ವರ್ಷದ ಯುವಕ ಮಾಜಿ ಅಧ್ಯಕ್ಷರನ್ನು 100 ಮೀಟರ್ ದೂರದಿಂದ ಗುರಿಯಾಗಿಸಿಕೊಂಡು, ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿದ ಕೂಡಲೇ ವೇದಿಕೆ ಬಳಿಯಿದ್ದ ಭದ್ರತಾ ಸಿಬ್ಬಂದಿ ಟ್ರಂಪ್‌ ನೆರವಿಗೆ ಧಾವಿಸಿ, ರಕ್ಷಣೆ ಮಾಡಿದ್ದಾರೆ. ಡೊನಾಲ್ಡ್‌ ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ತಂಡ ತಿಳಿಸಿದೆ. ಯುವಕ AR ಶೈಲಿಯ (AR-15) ರೈಫಲ್‌ನಿಂದ ಟ್ರಂಪ್‌ಗೆ ಗುಂಡು ಹಾರಿಸಿದ್ದು, ಘಟನೆ ನಡೆದ ಕೆಲ ಹೊತ್ತಿನಲ್ಲೇ ಈತನನ್ನು ಪತ್ತೆ ಹಚ್ಚಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.