ಉತ್ತರಾಖಂಡ: ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ಸುಮಾರು 9.30 ರ ವೇಳೆಗೆ ಈ ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದ ವೇಳೆ ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಮತ್ತು ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ನಿಯಮಿತ ನಿರ್ವಹಣಾ ಕಾರ್ಯಗಳ ವೇಳೆ ಬ್ರೇಕ್ ವೈಫಲ್ಯ ಸಂಭವಿಸಿದ್ದೇ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಪೂರ್ಣ ರೈಲು ಚಲನೆಯಾಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಹಳಿ ತಪ್ಪಿದ ಸುಮಾರು ಎರಡೂವರೆ ಗಂಟೆಗಳ ಬಳಿಕ ತಲುಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದ ನಂತರ ರೈಲು ಹಳಿಗಳ ಸಮೀಪ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಬಳಿಕ ಸರ್ಕಾರಿ ರೈಲ್ವೆ ಪೊಲೀಸ್ ಸಿಬ್ಬಂದಿ ಸ್ಥಳವನ್ನು ತಮ್ಮ ವಶಕ್ಕೆ ಪಡೆದು ಜನರನ್ನು ತೆರವುಗೊಳಿಸಿದರು. ಈ ಘಟನೆ ಕುರಿತು ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ.

View this post on Instagram

A post shared by News Karnataka (@newskarnataka)