Bengaluru 22°C
Ad

3 ಅಂತಸ್ತಿನ ಕಟ್ಟಡ ಕುಸಿತ: ಓರ್ವ ಮೃತ್ಯು, ಹಲವು ಮಂದಿ ಸಿಲುಕಿರುವ ಶಂಕೆ

ಲಕ್ನೋದ ಟ್ರಾನ್ಸ್‌ಪೋರ್ಟ್ ನಗರ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸುಮಾರು ಹತ್ತು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಲಕ್ನೋ : ಲಕ್ನೋದ ಟ್ರಾನ್ಸ್‌ಪೋರ್ಟ್ ನಗರ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸುಮಾರು ಹತ್ತು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳ ಪ್ರಕಾರ, ಕಟ್ಟಡದ ನೆಲಮಾಳಿಗೆಯಲ್ಲಿ ಕಟ್ಟಡ ಕುಸಿತದ ವೇಳೆ ಕಾಮಗಾರಿ ನಡೆಯುತ್ತಿತ್ತು. ಘಟನೆಯಲ್ಲಿ ಸುಮಾರು 13 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರ್ಮಿಲಾಪ್ ಬಿಲ್ಡಿಂಗ್ ಎಂದು ಕರೆಯಲ್ಪಡುವ ಕಟ್ಟಡವನ್ನು ಔಷಧ ವ್ಯಾಪಾರಕ್ಕಾಗಿ ಗೋಡೌನ್ ಆಗಿ ಬಳಸಲಾಗುತ್ತಿತ್ತು. ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳದಲ್ಲಿವೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸಿಕ್ಕಿಬಿದ್ದಿರುವ ವ್ಯಕ್ತಿಗಳನ್ನು ಹೊರತೆಗೆಯಲು ಶ್ರಮಿಸುತ್ತಿವೆ ಎಂದು ರಿಲೀಫ್ ಕಮಿಷನರ್ ಜಿಎಸ್ ನವೀನ್ ಕುಮಾರ್ ತಿಳಿಸಿದ್ದಾರೆ. “ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ರಕ್ಷಣಾ ತಂಡಗಳನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದ್ದು ಸಿಲುಕಿರುವ ವ್ಯಕ್ತಿಗಳನ್ನು ಹೊರತೆಗೆಯಲು ಕೆಲಸ ಮಾಡುತ್ತಿದೆ ಎಂದು ಕುಮಾರ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಮತ್ತು ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿ ಅವರು ಜಿಲ್ಲಾ ಆಡಳಿತದ ಅಧಿಕಾರಿಗಳು, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳಿಗೆ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.

https://x.com/PTI_News/status/1832399980558242099?

Ad
Ad
Nk Channel Final 21 09 2023