ಮುಂಬೈ: ನವಿಮುಂಬೈಯ ಶಹಬಾಜ್ನಲ್ಲಿ ಇಂದು (ಜುಲೈ 27) ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು ಜಿ+3 ಕಟ್ಟಡ. ಈ ಕಟ್ಟಡ ಇರುವ ಶಹಬಾಜ್ ಗ್ರಾಮ ಬೇಲಾಪುರ ವಾರ್ಡ್ ವ್ಯಾಪ್ತಿಗೆ ಬರುತ್ತವೆ. ಕಟ್ಟಡದಲ್ಲಿ 13 ಫ್ಲ್ಯಾಟ್ಗಳಿವೆ. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದೆ. ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಕೈಲಾಸ್ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಕ್ಷಿಸಲಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು 10 ವರ್ಷ ಹಳೆಯ ಕಟ್ಟಡ. ಯಾವ ಕಾರಣಕ್ಕಾಗಿ ಕುಸಿದಿದೆ ಎನ್ನುವ ಬಗ್ಗೆ ತನಿಖೆ ಮುಂದುವರೆದಿದೆ.

