ದೆಹಲಿ: ‘ವಂದೇ ಮಾತರಂ’ ಗಾಯನಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಹೊಸ ವಿಧೇಯಕವನ್ನು ಕೇಂದ್ರ ಸರ್ಕಾರ ಮಂಡಿಸಲಿದೆ. ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ವಿಧೇಯಕ-2026’ ಅನ್ನು ಮಳೆಗಾಲದ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ಮಂಡಿಸಲಿದ್ದು, ವಂದೇ ಮಾತರಂಗೆ ಸಾಂವಿಧಾನಿಕ ರಕ್ಷಣೆ ಸಿಗಲಿದೆ.

ಈ ಬಗ್ಗೆ ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ವಿಧೇಯಕದಲ್ಲಿ ಪ್ರಸ್ತಾವನೆ ಇದೆ. ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ವಿಧೇಯಕ-2026 ಅನ್ನು ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ರಾಜ್ಯಸಭೆ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದ್ದರು. ಇದೀಗ ವಿಧೇಯಕವನ್ನು ಸದನದಲ್ಲಿ ಮಂಡಿಸಲಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಈ ಕುರಿತಾದ ಮಹತ್ವದ ವಿಧೇಯಕವನ್ನು ಮಂಡಿಸಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ವಿಧೇಯಕ-2026’ ಅನ್ನು ಪರಿಶೀಲನೆ ಹಾಗೂ ಅಂಗೀಕಾರಕ್ಕಾಗಿ ಈಗಾಗಲೇ ರಾಜ್ಯಸಭೆಯ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದ್ದಾರೆ. ಶೀಘ್ರದಲ್ಲೇ ಈ ಕರಡು ಕಾನೂನನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದುಕೊಳ್ಳಲು ಸರ್ಕಾರ ಸರ್ವ ಸನ್ನದ್ಧವಾಗಿದೆ.

ಹೊಸದಾಗಿ ಜಾರಿಗೆ ಬರಲಿರುವ ಈ ಕಾಯ್ದೆಯ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ಹಾಗೂ ವಂದೇ ಮಾತರಂ ಗೀತೆ ಗಾಯನಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವುದು ಕಾನೂನುಬಾಹಿರ ಅಪರಾಧವಾಗಲಿದೆ. ಇಂತಹ ಕೃತ್ಯ ಎಸಗುವವರಿಗೆ ಗರಿಷ್ಠ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಭಾರಿ ದಂಡ ವಿಧಿಸಲು ಈ ವಿಧೇಯಕದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವು ಎಲ್ಲಾ ಅಧಿಕೃತ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಗೀತೆಯ ಗೌರವ ಕಾಯಲು ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.