Bengaluru 30°C
Ad

ಛತ್ತೀಸ್‌ಗಢ: ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 7 ನಕ್ಸಲರ ಹತ್ಯೆ

ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 7 ನಕ್ಸಲರ ಹತ್ಯೆಯಾದ ಘಟನೆ ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ನಡೆದಿದೆ. 

ರಾಯ್ಪುರ:  ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 7 ನಕ್ಸಲರ ಹತ್ಯೆಯಾದ ಘಟನೆ ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ನಡೆದಿದೆ.

ಬೆಳಗ್ಗೆ 11 ಗಂಟೆ ಹೊತ್ತಿಗೆ ಭದ್ರತಾ ಪಡೆಗಳ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು. ಮಾವೋವಾದಿ ಸಮವಸ್ತ್ರದಲ್ಲಿದ್ದ ಏಳು ನಕ್ಸಲರು ಗುಂಡಿಗೆ ಬಲಿಯಾಗಿದ್ದಾರೆ.

ದಾಂತೇವಾಡ, ನಾರಾಯಣಪುರ ಮತ್ತು ಬಸ್ತಾರ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್‌ನ ಸದಸ್ಯರು, ಬಸ್ತಾರ್ ಫೈಟರ್ಸ್ ಮತ್ತು ವಿಶೇಷ ಕಾರ್ಯಪಡೆ, ರಾಜ್ಯ ಪೊಲೀಸ್‌ನ ಘಟಕ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ಎನ್‌ಕೌಂಟರ್ ಸ್ಥಳದಿಂದ ಒಟ್ಟು ಏಳು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಈ ವರ್ಷ ಇಲ್ಲಿಯ ವರೆಗೆ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 112 ನಕ್ಸಲರು ಹತ್ಯೆಯಾಗಿದ್ದಾರೆ.

Ad
Ad
Nk Channel Final 21 09 2023
Ad