Bengaluru 27°C
Ad

ಬಸ್​ಗೆ ಭೀಕರವಾಗಿ ಟ್ರಕ್ ಡಿಕ್ಕಿ; ಒಂದೇ ಕುಟುಂಬದ 7 ಜನ ಸಾವು

Accidnt

ಚಂಡೀಗಢ: ದೇವರ ದರ್ಶನಕ್ಕೆ ಹೋಗುತ್ತಿದ್ದ ಮಿನಿ ಬಸ್‌ಗೆ ಟ್ರಕ್​ವೊಂದು ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಹರಿಯಾಣದ ಅಂಬಾಲಾ ಬಳಿಯ ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರೆಲ್ಲರೂ ಒಂದೇ ಕುಟುಂಬದವರೆಂದು ತಿಳಿದು ಬಂದಿದೆ. ಹರಿಯಾಣ ಮೂಲದ ಒಂದೇ ಕುಟುಂಬದವರು ವೈಷ್ಣೋದೇವಿಯ ದರ್ಶನ ಪಡೆಯಲೆಂದು ಮಿನಿ ಬಸ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಂಬಾಲಾ ಬಳಿಯ ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್​ವೊಂದು ವೇಗವಾಗಿ ಬಂದು ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ 7 ಜನರು ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಸಮಯ ಟ್ರಾಫಿಕ್ ಉಂಟಾಗಿತ್ತು ಎಂದು ಹೇಳಲಾಗಿದೆ.

Ad
Ad
Nk Channel Final 21 09 2023
Ad