ನವದೆಹಲಿ: ರಾಜ್ಯವೊಂದರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಅಚ್ಚರಿಯ ಸಂಗತಿ ಎಂದರೆ ಚುನಾವಣೆಗೆ ಸ್ಪರ್ಧಿಸದೆಯೇ 70%ರಷ್ಟು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.
ತ್ರಿಪುರಾದಲ್ಲಿ ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಶೇ.70ರಷ್ಟು ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ, ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿ ಹಾಗೂ ಜಿಲ್ಲಾ ಕೌನ್ಸಿಲ್ ಸೇರಿದಂತೆ ಒಟ್ಟು 6,889 ಸ್ಥಾನಗಳಿವೆ. ಈ ಪೈಕಿ ಬಿಜೆಪಿ 4,805 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ ಎಂದು ಹೇಳಿದ್ದಾರೆ.
ವರದಿಯ ಪ್ರಕಾರ, ತ್ರಿಪುರಾದ ಗ್ರಾಮ ಪಂಚಾಯತ್‌ಗಳಲ್ಲಿ, ಬಿಜೆಪಿ ಒಟ್ಟು 6,370 ಸ್ಥಾನಗಳಲ್ಲಿ 4,550 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ, ಅಂದರೆ 71% ಸ್ಥಾನಗಳಲ್ಲಿ ಮತದಾನ ನಡೆಯಲಿಲ್ಲ.116 ಜಿಲ್ಲಾ ಪರಿಷತ್ ಸ್ಥಾನಗಳ ಪೈಕಿ 20ರಲ್ಲಿ ಬಿಜೆಪಿ ಅವಿರೋಧವಾಗಿ ಗೆದ್ದಿದೆ.
ಬಿಜೆಪಿ ಎಲ್ಲಾ 188 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಸಿಪಿಐ(ಎಂ) 148 ಮತ್ತು ಕಾಂಗ್ರೆಸ್ 98 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇದರ ಹೊರತಾಗಿ ರಾಜ್ಯದಲ್ಲಿ ಬಿಜೆಪಿಯ ಮಿತ್ರ ಪಕ್ಷ ತಿಪ್ರಾ ಮೋಥಾ 11 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಅಸಿತ್ ಕುಮಾರ್ ದಾಸ್ ಹೇಳಿದ್ದಾರೆ. 116 ಜಿಲ್ಲಾ ಪರಿಷತ್ ಸ್ಥಾನಗಳಲ್ಲಿ ಬಿಜೆಪಿ ಅವಿರೋಧವಾಗಿ 17 ಪ್ರತಿಶತವನ್ನು ಗೆದ್ದಿದೆ ಎಂದು ದಾಸ್ ಹೇಳಿದರು.

