ನವದೆಹಲಿ: ಛತ್ತೀಸ್‌ಗಢದ ಅಬುಜ್ಮಾರ್​ನಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲ್‌ಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 8 ನಕ್ಸಲರು ಹತರಾಗಿದ್ದಾರೆ.ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಸುದೀರ್ಘ ಗುಂಡಿನ ಚಕಮಕಿ ನಡೆಯುತ್ತಿದೆ.

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ 4 ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮಾರ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.