ಛತ್ತೀಸಗಢ: ಸಿಡಿಲು ಬಡಿದು ಕೆಲವು ಶಾಲಾ ಮಕ್ಕಳು ಸೇರಿದಂತೆ 8 ಜನ ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ಛತ್ತೀಸಗಢ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಜೋರತರಾಯ್ ಗ್ರಾಮದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ, ‘ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಜನ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ರಾಜನಂದಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗಾರ್ಗ್ ತಿಳಿಸಿದ್ದಾರೆ.
Ad