Bengaluru 22°C
Ad

ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ತಿದ್ದ ಬಸ್‌ಗೆ ಬೆಂಕಿ!

ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಲು ಪಂಪಾದಿಂದ ನಿಲಕ್ಕಲ್‌ಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ತಿರುವನಂತಪುರಂ: ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಲು ಪಂಪಾದಿಂದ ನಿಲಕ್ಕಲ್‌ಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

Ad

ಚಳಕ್ಕಯಂ ಮತ್ತು ನಿಲಕ್ಕಲ್ ನಡುವಿನ ಅರಣ್ಯದಲ್ಲಿ ಈ ಘಟನೆ ಸಂಭವಿಸಿದೆ. ವಾಹನದಿಂದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಹೊರಹೊಮ್ಮುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ನಿಲ್ಲಿಸಿದ್ದಾನೆ. ಬಸ್ಸಿಗೆ ಹಾನಿಯಾಗಿದ್ದರೂ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.

Ad

ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಮಾಹಿತಿ ತಿಳಿದ ಕೂಡಲೇ ಪಂಪಾ ಮತ್ತು ನಿಲಕ್ಕಲ್‌ನ ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ತ್ವರಿತಗತಿಯಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

Ad
Ad
Ad
Nk Channel Final 21 09 2023