ಲಕ್ನೋ: ಹತ್ರಾಸ್‍ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಹಿಂದಿನಿಂದ ವ್ಯಾನ್‍ಗೆ ಬಸ್ ಡಿಕ್ಕಿಯಾದ ಪರಿಣಾಮ ವ್ಯಾನ್‍ನಲ್ಲಿ ಪ್ರಯಾಣಿಸುತ್ತಿದ್ದ 12 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 16 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ವ್ಯಾನ್‍ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಪ್ರಯಾಣಿಕರು ಹತ್ರಾಸ್‍ನಿಂದ ಆಗ್ರಾಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Ad