ಲಕ್ನೋ-ಆಗ್ರಾ ಎಕ್ಸ್​ಪ್ರೆಸ್​ ವೇನಲ್ಲಿ ಬಸ್​ ಕಂದಕಕ್ಕೆ ಬಿದ್ದ ಪರಿಣಾಮ 40 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜೌನ್‌ಪುರದಿಂದ ದೆಹಲಿಗೆ ತೆರಳುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಪಲ್ಟಿಯಾಗಿದೆ.

ಗಾಯಗೊಂಡ 30 ಪ್ರಯಾಣಿಕರನ್ನು ಸೌರಿಖ್ ಸರ್ಕಾರಿ ಆಸ್ಪತ್ರೆಗೆ ಮತ್ತು 12 ಮಂದಿಯನ್ನು ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜು ತಿರ್ವಾಗೆ ಕಳುಹಿಸಲಾಗಿದೆ. ಎಎಸ್ಪಿ, ಸಿಒ ಸೇರಿದಂತೆ ಹಲವು ಠಾಣೆಗಳ ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದರು. ಛಿಬ್ರಾಮೌ ತಹಸಿಲ್‌ನ ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.