ಶ್ರೀನಗರ: ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್‌ಹೇಲ್ ಪ್ರದೇಶದಲ್ಲಿ ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿರುವ ಘಟನೆ ನಡೆದಿದೆ.
ಅಪಘಾತದಲ್ಲಿ 24ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಅಲ್ಲದೇ ಓರ್ವ ಯೋಧನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಯುತ್ತಿದೆ. ಸ್ಥಳೀಯರೂ ರಕ್ಷಣಾ ತಂಡಗಳ ಜೊತೆಗೆ ಸಹಾಯಕ್ಕೆ ಮುಂದಾಗಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
Ad