Bengaluru 27°C
Ad

ಶಾಲಾ ಪಠ್ಯದಲ್ಲಿ ʼತುರ್ತು ಪರಿಸ್ಥಿತಿ’ಯ ಅಧ್ಯಾಯ ಅಳವಡಿಸಲು ಮುಂದಾದ ಸರ್ಕಾರ

ಮಧ್ಯ ಪ್ರದೇಶದ ಬಿಜೆಪಿ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಕುರಿತು ಅಧ್ಯಾಯವೊಂದನ್ನು ಅಳವಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಭೋಪಾಲ್‌: ಮಧ್ಯ ಪ್ರದೇಶದ ಬಿಜೆಪಿ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಕುರಿತು ಅಧ್ಯಾಯವೊಂದನ್ನು ಅಳವಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಮಾಹಿತಿ ನೀಡಿದ್ದಾರೆ.

Ad
300x250 2

ಈ ಅಧ್ಯಾಯ 1975ರಲ್ಲಿ ಕಾಂಗ್ರೆಸ್ ಸರ್ಕಾರವು ಹೇರಿದ ತುರ್ತು ಪರಿಸ್ಥಿತಿಯ ಸಮಯದಲ್ಲಿ ನಡೆದ ʼಅತಿರೇಕಗಳು ಮತ್ತು ದಬ್ಬಾಳಿಕೆʼಯನ್ನು ವಿವರಿಸಲಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼ1975ರಿಂದ 1977ರ ತುರ್ತು ಪರಿಸ್ಥಿತಿಯ ಅವಧಿಯಲ್ಲಿನ ಹೋರಾಟದ ಬಗ್ಗೆ ಇಂದಿನ ಪೀಳಿಗೆಗೆ ಅರಿವು ಮೂಡಿಸುವುದು ಈ ಕ್ರಮದ ಹಿಂದಿನ ಉದ್ದೇಶʼʼ ಎಂದು ಹೇಳಿದ್ದಾರೆ.

ದೇಶದಲ್ಲಿ ಅಂದು ಚಾಲ್ತಿಯಲ್ಲಿದ್ದ ಪರಿಸ್ಥಿತಿಗಳು, ದಬ್ಬಾಳಿಕೆ ಮತ್ತು ಆಗಿನ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮವನ್ನು ವಿರೋಧಿಸಿದ ಲೋಕತಂತ್ರ ಸೇನಾನಿ (ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರು)ಗಳ ಹೋರಾಟವನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಲಾಗುವುದು.

Ad
Ad
Nk Channel Final 21 09 2023
Ad