ಹೈದರಾಬಾದ್ : ಕಟ್ಟಡವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್‌ ನ ಚಾರ್‌ ಮಿನಾರ್‌ ಸಮೀಪದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

11 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿವೆ. ಕಟ್ಟಡದ ಒಳಗೆ ಇನ್ನಷ್ಟು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

ಬೆಂಕಿ ಅನಾಹುತಕ್ಕೆ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಶ್ರೀಕೃಷ್ಣ ಪರ್ಲ್‌ ಬಿಲ್ಡಿಂಗ್‌ ಹೆಸರಿನ ಈ ಕಟ್ಟಡದಲ್ಲಿ ಮುಂಜಾನೆ 6.00 ರ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಗಂಭೀರವಾಗಿ ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.