ಪಂಜಾಬ್: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ಆಘಾತಕಾರಿ ಘಟನೆ ಪಂಜಾಬ್‌ನ ಲೂಧಿಯಾನದಲ್ಲಿ ನಡೆದಿದೆ.
ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಟ್ಟಡ ಕುಸಿದು ಬೀಳುತ್ತಿದ್ದಂತೆ ಮಹಿಳೆ ತನ್ನ ಕೈಯಲ್ಲಿ ಪುಟ್ಟ ಮಗುವನ್ನು ಹಿಡಿದುಕೊಂಡು ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಈ ಘಟನೆ ಮಂಗಳವಾರ ಲುಧಿಯಾನದ ಓಲ್ಡ್ ಮಾರ್ಕೆಟ್ ಬಳಿ ಸಂಭವಿಸಿದೆ. ಸುಮಾರು 100 ವರ್ಷ ಹಳೆಯದು ಎನ್ನಲಾದ ಕಟ್ಟಡ ಕುಸಿದು ಬಿದ್ದಿದ್ದು, ಮಹಿಳೆ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಟ್ಟಡ ಕುಸಿದು ಬೀಳುತ್ತಿದ್ದಂತೆ ಸ್ಥಳೀಯರು ಪ್ರಾಣ ರಕ್ಷಣೆಗಾಗಿ ಓಡಲು ಆರಂಭಿಸಿದ್ದಾರೆ.
ಮಹಿಳೆ ಮಗುವನ್ನು ಕಂಕುಳಲ್ಲಿ ಎತ್ತಿ ಓಡುತ್ತಿರುವುದನ್ನು ಕಾಣಬಹುದು. ಮಹಿಳೆ ಪ್ರಾಣಾಪಾಯದಿಂದ ಪಾರಾಗುತ್ತಿದ್ದಂತೆ ಕಟ್ಟಡ ಕುಸಿದಿದ್ದು, ಏಕಾಏಕಿ ಕುಸಿದು ಬಿದ್ದ ಕಟ್ಟಡದ ಅವಶೇಷಗಳಿಂದ ಮಹಿಳೆ ಹೊರಬರುತ್ತಿರುವುದನ್ನು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮಹಿಳೆ ಮತ್ತು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.
https://x.com/hamariawaz_news/status/1841470029092581518?