ಹೈದರಾಬಾದ್‌: ಫಾರ್ಮಾ ಕಂಪನಿಯಲ್ಲಿ ಭಾರೀ ಸ್ಫೋಟವೊಂದು ಸಂಭವಿಸಿದ್ದು, 18 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲೆ ಜಿಲ್ಲೆಯಲ್ಲಿ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಚ್ಚುತ್ತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿ, ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸ್ಫೋಟಕ್ಕೆ ಸೂಕ್ತ ಕಾರಣ ಏನೆಂಬುದು ತಿಳಿದಿಲ್ಲ. ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ಸ್ಥಳದಿಂದ ಬಂದ ದೃಶ್ಯಗಳು ರಿಯಾಕ್ಟರ್‌ನಿಂದ ಹೊಗೆ ಹೊರ ಬರುತ್ತಿರುವುದು ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ಆವರಿಸುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

https://x.com/yasarullah/status/1826205456857231547?