Bengaluru 23°C
Ad

ಕಾರು ಚಲಾಯಿಸಿ 16 ವರ್ಷದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಅಪ್ರಾಪ್ತ : ಪೊಲೀಸರ ವಶಕ್ಕೆ

ತಂದೆಯ ಎಸ್‌ಯುವಿ ಕಾರನ್ನು ಚಲಾಯಿಸುತ್ತಿದ್ದ 17 ವರ್ಷದ ಅಪ್ರಾಪ್ತ 16 ವರ್ಷದ ಹುಡುಗಿಗೆ ಡಿಕ್ಕಿ ಹೊಡೆದಿರುವ ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ.

ಮುಂಬೈ: ತಂದೆಯ ಎಸ್‌ಯುವಿ ಕಾರನ್ನು ಚಲಾಯಿಸುತ್ತಿದ್ದ 17 ವರ್ಷದ ಅಪ್ರಾಪ್ತ 16 ವರ್ಷದ ಹುಡುಗಿಗೆ ಡಿಕ್ಕಿ ಹೊಡೆದಿರುವ ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ.

ಥಾಲ್ತೇಜ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದಿಯಾ ಪ್ರಜಾಪತಿ ಸಾಂದೀಪನಿ ಸೊಸೈಟಿ ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದು ಏಕಾಏಕಿ ಡಿಕ್ಕಿ ಹೊಡೆಸಿದ್ದಾನೆ.

ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕೂಡಲೇ ಇದನ್ನು ಗಮನಿಸಿದ ಸ್ಥಳೀಯರು ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ಸೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ಸೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

ಅಪ್ರಾಪ್ತನ ಪೋಷಕರು ಯಾರೆಂದು ಈವರೆಗೂ ತಿಳಿದು ಬಂದಿಲ್ಲ. ಹೀಗೆ ಪೊಲೀಸರು ಅಪ್ರಾಪ್ತನ ಸಂಬಂಧಿಕರನ್ನು ಕರೆಸಿದ್ದಾರೆ ಮೂಲಗಳು ತಿಳಿಸಿವೆ. ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Ad
Ad
Nk Channel Final 21 09 2023
Ad