Ad

ಕಾರಿಗೆ ಡಿಕ್ಕಿ ಹೊಡೆದ ಸ್ಕೂಟಿ: ತಾಯಿ ಮೃತ್ಯು, ಮಗಳು ಗಂಭೀರ

ಅಪ್ರಾಪ್ತ ಚಾಲಕ ಚಲಾಯಿಸುತ್ತಿದ್ದ ಕಾರಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಅಪ್ರಾಪ್ತ ಚಾಲಕ ಚಲಾಯಿಸುತ್ತಿದ್ದ ಕಾರಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

42 ವರ್ಷದ ಭಾವನಾ ಮಿಶ್ರಾ ಮೃತಪಟ್ಟಿದ್ದಾರೆ. ಅವರ 13 ವರ್ಷದ ಮಗಳು ಮೇಧಾವಿ ಮಿಶ್ರಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆ ಕ್ಲಿನಿಕ್‌ನಿಂದ ಹಿಂತಿರುಗುತ್ತಿದ್ದಾಗ ಅವರ ಸ್ಕೂಟರ್‌ಗೆ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದೆ. ಕಾರು ಚಾಲಕ ದ್ವಿತೀಯ ಪಿಯುಸಿ ವಿದ್ಯಾರ್ಥಿ, ಎಸ್‌ಯುವಿಯು ಗಂಟೆಗೆ ಸುಮಾರು 100 ಕಿಮೀ ವೇಗದಲ್ಲಿ ಚಲಿಸುತ್ತಿತ್ತು.

ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆಯುವ ಮೊದಲು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆರೋಪಿ ಬಾಲಕನಿಗೆ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ ಮತ್ತು ಆತ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಸ್ಟಂಟ್ ಮಾಡಲು ಮುಂದಾಗಿದ್ದ.

ಬಾಲಕನ ತಂದೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ವೇಳೆ ಬಾಲಕನ ಮೂವರು ಸ್ನೇಹಿತರು ಕಾರಿನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಚಾಲಕನನ್ನು ಅವನ ತಂದೆಯೊಂದಿಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮೃತಳ ಪತಿ ಅನುಪ್ ಮಿಶ್ರಾ ನೀಡಿದ ದೂರಿನ ಮೇರೆಗೆ ಪೊಲೀಸರು ಅಪರಾಧಿ ನರಹತ್ಯೆ ಮತ್ತು ಅಜಾಗರೂಕ ಚಾಲನೆ ಸೇರಿದಂತೆ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad
Ad
Nk Channel Final 21 09 2023