ಶೀನಗರ :  ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಜುಲೈ 27ರಂದು ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಸೈನಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನ್ನು ಹೊಡೆದುರುಳಿಸಲಾಗಿದೆ.

ʼʼಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬಾರ್ಡರ್ ಆ್ಯಕ್ಷನ್‌ ಟೀಮ್‌ನ ಉಗ್ರನೊಬ್ಬ ಸಾವನ್ನಪ್ಪಿದ್ದಾನೆʼʼ ಎಂದು ಸೇನೆ ದೃಢಪಡಿಸಿದೆ. ಇದರಲ್ಲಿ ಒಬ್ಬ ಪಾಕಿಸ್ತಾನಿ ಉಗ್ರ ಸಾವನ್ನಪ್ಪಿದ್ದು, ನಮ್ಮ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆʼʼ ಎಂದು ತಿಳಿಸಿದೆ. ಕಳೆದ ಒಂದು ತಿಂಗಳಲ್ಲಿ ಕುಪ್ವಾರದಲ್ಲಿ ನಡೆದ ನಾಲ್ಕನೇ ಎನ್‌ಕೌಂಟರ್ ಇದಾಗಿದೆ.