ತೆಲಂಗಾಣ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯನ್ನು ಬೀದಿನಾಯಿಗಳು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ರಾಜಣ್ಣ ಸಿರ್ಸಿಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಮುಸ್ತಾಬಾದ್ ಮಂಡಲದ ಕೇಂದ್ರ ಕಛೇರಿಯ ಸೇವಾಲಾಲ್ ತಾಂಡಾ ಪ್ರದೇಶದ ತನ್ನ ಗುಡಿಸಲಿನಲ್ಲಿ ಮಲಗಿದ್ದ ವೃದ್ಧೆಯೊಬ್ಬಳನ್ನು ನಾಯಿಗಳ ಹಿಂಡು ಕಚ್ಚಿಹಾಕಿವೆ. ಅವರು ಗುಡಿಸಲಿನಲ್ಲಿ ಮಲಗಿದ್ದಾಗ ಬೀದಿ ನಾಯಿಗಳು ದಾಳಿ ನಡೆಸಿವೆ, ನಾಯಿಗಳು ಅವರ ದೇಹದ ಭಾಗಗಳನ್ನು ತಿಂದು ಹಾಕಿದೆ.

ಮಹಿಳೆಯ ಮಗ ನೀಡಿದ ದೂರಿನ ಮೇರೆಗೆ ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ.