ಜೈಪುರ: ವಿದ್ಯಾರ್ಥಿಗೆ ಸಹಪಾಠಿಯೊಬ್ಬ ಶಾಲೆಯಲ್ಲೇ ಚಾಕುವಿನಿಂದ ಇರಿದ ಘಟನೆ ರಾಜಸ್ಥಾನದ ಉದಯಪುರದ ಮಧುಬನ್ ಪ್ರದೇಶದಲ್ಲಿ ನಡೆದಿದೆ.
ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಚಾರ ತಿಳಿದ ಬೆನ್ನಲ್ಲೇ ಹಿಂಸಾಚಾರ ನಡೆದಿದ್ದು ಜಿಲ್ಲಾಡಳಿತ ಈಗ 144 ಸೆಕ್ಷನ್ ಜಾರಿ ಮಾಡಿದೆ. ಅಷ್ಟೇ ಅಲ್ಲದೇ ಉದಯ್‌ಪುರದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ 24 ಗಂಟೆಗಳ ಕಾಲ ಇಂಟರ್‌ನೆಟ್ ಸೇವೆಯನ್ನು ಸ್ಥಗಿತ ಮಾಡಿದೆ.
ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಕನಿಷ್ಠ ಮೂರು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ವಿದ್ಯಾರ್ಥಿಗಳ ಮಧ್ಯೆ ಸಣ್ಣ ವಿಚಾರಕ್ಕೆ ನಡೆದ ಗಲಾಟೆ ನಡೆದಾಗ ಮತ್ತೊಬ್ಬ ವಿದ್ಯಾರ್ಥಿ ಚಾಕು ಇರಿದಿದ್ದಾನೆ. ಸಂತ್ರಸ್ತ ಬಾಲಕ ಈಗ ತುರ್ತು ನಿಗಾ ಘಟಕದಲ್ಲಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಾಳು ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಸ್ಥಳೀಯ ರಾಜಕೀಯ ಮುಖಂಡರು ಆಗಮಿಸುತ್ತಿದ್ದಾರೆ