ಜೈಪುರ: ರಾಜಸ್ಥಾನದ ಬಿಕಾನೇರ್‌ನ ಮಹಾಜನ್‌ನ ಜೈತ್‌ಪುರ ಟೋಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅವರು ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರಿಯಾಣದ ಪರವಾನಗಿ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಭೀಕರ ಅಪಘಾತಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ.

