Bengaluru 22°C
Ad

ಮನೆ ಕುಸಿತ: 3 ಜನ ಮೃತ್ಯು, 15ಕ್ಕೂ ಹೆಚ್ಚು ಮಂದಿಯ ರಕ್ಷಣೆ

ಸೆಂಟ್ರಲ್​ ಡೆಲ್ಲಿಯ ಕರೋಲ್ ಭಾಗ್​​ನಲ್ಲಿ ಮನೆಯೊಂದು ಕುಸಿದಿದ್ದು, ಇದುವರೆಗೂ 3 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ 15ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

ದೆಹಲಿ: ಸೆಂಟ್ರಲ್​ ಡೆಲ್ಲಿಯ ಕರೋಲ್ ಭಾಗ್​​ನಲ್ಲಿ ಮನೆಯೊಂದು ಕುಸಿದಿದ್ದು, ಇದುವರೆಗೂ 3 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ 15ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗ್ಗೆಯಿಂದ ಅಗ್ನಿಶಾಮಕ ಸಿಬ್ಬಂದಿ, ದೆಹಲಿ ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನಾವು ಇದುವರೆಗೂ 15ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದೇವೆ. ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಸುಮಾರು 3 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಸೆಂಟ್ರಲ್​ ಡೆಲ್ಲಿ ಉಪ ಪೊಲೀಸ್ ಆಯುಕ್ತ ಎಂ ಹರ್ಷ್ ವರ್ಧನ್ ತಿಳಿಸಿದ್ದಾರೆ.

Ad
Ad
Nk Channel Final 21 09 2023