ಲಕ್ನೋ: ಮಾಫಿಯಾ ಡಾನ್, ಗುಂಡೇಟಿಗೆ ಬಲಿಯಾಗಿದ್ದ ರಾಜಕಾರಣಿ ಅತೀಕ್ ಅಹ್ಮದ್‌ನ ಕಿರಿಯ ಪುತ್ರ ಆಬಾನ್ ಅಹ್ಮದ್ ಸೇರಿದಂತೆ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಝಾನ್ಸಿಯ ಪುಂಚ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇವರು ಪ್ರಯಾಣಿಸುತ್ತಿದ್ದ ಕಾರು (Car) ವೇಗವಾಗಿ ಬಂದು ರಸ್ತೆ ವಿಭಜಕಕ್ಕೆ (ಡಿವೈಡರ್) ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಈ ಕಾರಿನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಪ್ರಯಾಗ್‌ರಾಜ್‌ನಿಂದ ಝಾನ್ಸಿ ಜೈಲಿನಲ್ಲಿರುವ ಅತೀಕ್ ಅಹ್ಮದ್‌ನ ಇನ್ನೊಬ್ಬ ಮಗ ಅಲಿ ಅಹ್ಮದ್‌ನನ್ನು ಭೇಟಿಯಾಗಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

