ಉತ್ತರಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದೆ.
ಶನಿವಾರ ಯುವಕನೊಬ್ಬ ಕೆಲಸದ ನಿಮಿತ್ತ ಬೈಕ್‌ನಲ್ಲಿ ಸದಾಬಾದ್‌ನಿಂದ ಫತೇಹಾಬಾದ್‌ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮುಂಭಾಗದಿಂದ ಬಂದ ಸರಕು ಸಾಗಣೆಯ ಕಾರ್ಗೋ ವ್ಯಾನ್ಗೆ ಯುವಕನ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮಾರುದ್ದ ದೂರಕ್ಕೆ ಗಾಳಿಯಲ್ಲಿ ಹಾರಿ ಹೋಗಿ ಬಿದ್ದಿದ್ದಾನೆ.
ತೀವ್ರ ಗಾಯಗೊಂಡ ಆತ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅಪಘಾತಕ್ಕೆ ಸಂಬಂಧಿಸಿದ ಭೀಕರ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಬೈಕ್ ಸವಾರನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ತನಿಖೆಯ ವೇಳೆಯಲ್ಲಿ ತಿಳಿದುಬಂದಿದೆ.
Ad