Bengaluru 21°C
Ad

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕಚೇರಿಯ ಎದುರು ಮಹಿಳೆ ಆತ್ಮಹತ್ಯೆಗೆ ಯತ್ನ

ಉಪಮುಖ್ಯಮಂತ್ರಿ ಕಚೇರಿ ಎದುರು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. 

ಆಂಧ್ರಪ್ರದೇಶ: ಉಪಮುಖ್ಯಮಂತ್ರಿ ಕಚೇರಿ ಎದುರು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಉಪಮುಖ್ಯಮಂತ್ರಿ ಪವನ್​ ಕಲ್ಯಾಣ್ ಅವರ ಕ್ಯಾಂಪ್ ಕಚೇರಿ ಬಳಿ ಮಹಿಳೆಯೊಬ್ಬರು ತನ್ನ ಜೀವವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದರು, ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಅವರನ್ನು ರಕ್ಷಣೆ ಮಾಡಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಶ್ರೀಕಾಕುಳಂ ಜಿಲ್ಲೆಯ ನಿವಾಸಿಯಾದ ದುರ್ಗಾದೇವಿ ಕ್ಯಾಂಪ್ ಆಫೀಸ್ ಬಳಿಯಿರುವ ಕಟ್ಟಡವನ್ನು ಏರಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಮಹಿಳೆ ನಿರ್ಧರಿಸಿದ್ದಳು.

ಶ್ರೀಕಾಕುಳಂನಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ನಾಯಕರ ಒತ್ತುವರಿಯಿಂದ ತನ್ನ ಭೂಮಿಯನ್ನು ಕಳೆದುಕೊಂಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಪಕ್ಷದ ಮುಖಂಡರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

 

 

Ad
Ad
Nk Channel Final 21 09 2023
Ad