Ad

ಬೊಲೆರೊ, ಟ್ರಕ್​ ನಡುವೆ ಭೀಕರ ಅಪಘಾತ : ಇಬ್ಬರು ಮಕ್ಕಳು ಸೇರಿ 9 ಜನರು ಸಾವು

ಬೊಲೆರೊ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಜಸ್ಥಾನ: ಬೊಲೆರೊ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad
300x250 2

ಕರೌಲಿ ಮತ್ತು ಮಂದರಯಾಲ್​​ ರಸ್ತೆಯ ದುಂಡಾಪುರ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಕರೌಲಿ ಜಿಲ್ಲಿಯ ಕಿಯೋಲಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೊಲೊರೊ ವಾಹನಕ್ಕೆ ಟ್ರಕ್​ ಗುದ್ದಿದೆ ಪರಿಣಾಮ ಬೊಲೊರೊದಲ್ಲಿ 13 ಜನರಿದ್ದರು. ಅದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ.

ಇನ್ನು ಅಪಘಾತದಲ್ಲಿ ಬೊಲೊರೊ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸಮಯದಲ್ಲಿ ದೊಡ್ಡ ಶಬ್ಧ ಏರ್ಪಟ್ಟಿದ್ದು, ಸ್ಥಳಕ್ಕೆ ಸ್ಥಳೀಯರು ಆಗಮಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮತ್ತು ಆ್ಯಂಬುಲೆನ್ಸ್​ಗೆ ಮಾಹಿತಿ ನೀಡಿದ್ದಾರೆ. ಅತ್ತ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

Ad
Ad
Nk Channel Final 21 09 2023
Ad