ತೆಲಂಗಾಣ: ಲಾರಿ ಮತ್ತು ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು-ಲಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ.
ಯೆರವಳ್ಳಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಾರಿನ ಡ್ರೈವರ್ ತುಂಬಾ ಸ್ಪೀಡ್ನಿಂದ ಬರುತ್ತಿದ್ದರು. ವೇಗವಾಗಿ ಹಿಂದಿನಿಂದ ಬಂದ ಸ್ಕಾರ್ಪಿಯೋ ಡ್ರೈವರ್, ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಅಪಘಾತ ಸಂಭವಿಸಿದೆ.
ಇಬ್ಬರು ಮಹಿಳೆಯರು, ಒಂದು ಮಗು ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

