ತಿರುವನಂತಪುರಂ: ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಈ ಹಿಂದಿನ ಲೋಕಸಭೆ ಚುನಾವಣೆಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು.

ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.