Bengaluru 22°C
Ad

ಕೇರಳದ ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಭರ್ಜರಿ ಜಯ

ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ತಿರುವನಂತಪುರಂ: ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಈ ಹಿಂದಿನ ಲೋಕಸಭೆ ಚುನಾವಣೆಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು.

ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.

 

Ad
Ad
Nk Channel Final 21 09 2023
Ad