ಚೆನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಸರಳ ಬಹುಮತದತ್ತ (118 ಸ್ಥಾನ) ದಾಪುಗಾಲು ಹಾಕುತ್ತಿದ್ದು, ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ.

ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಲು ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ವಿಜಯ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಟಿವಿಕೆ ಅಧ್ಯಕ್ಷ ವಿಜಯ್ ಅವರು ಸ್ಪರ್ಧಿಸಿರುವ ಪೆರಂಬೂರ್ ಮತ್ತು ತಿರುಚ್ಚಿರಾಪಳ್ಳಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಸ್ವಕ್ಷೇತ್ರ ಕೊಲತ್ತೂರ್‌ನಲ್ಲಿ ಹಿನ್ನಡೆ ಅನುಭವಿಸುತ್ತಿರುವುದು ಡಿಎಂಕೆ ಪಾಳಯಕ್ಕೆ ದೊಡ್ಡ ಆಘಾತ ನೀಡಿದೆ. ಆದರೆ, ಉದಯನಿಧಿ ಸ್ಟಾಲಿನ್ ಚೆಪಾಕ್ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

— Poornima Murali (@nimumurali) May 4, 2026