Bengaluru 27°C
Ad

ಬಿಜೆಪಿಯ ಹಿರಿಯ ನಾಯಕ ಎಲ್​.ಕೆ ಅಡ್ವಾಣಿ ​​ಆಸ್ಪತ್ರೆಗೆ ದಾಖಲು

ಮಾಜಿ ಉಪ ಪ್ರಧಾನಿ, ಭಾರತ ರತ್ನ ಲಾಲ್​​ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಏಮ್ಸ್​​ಗೆ ಬುಧವಾರ ರಾತ್ರಿ ದಾಖಲಿಸಲಾಗಿದೆ.

ನವದೆಹಲಿ: ಮಾಜಿ ಉಪ ಪ್ರಧಾನಿ, ಭಾರತ ರತ್ನ ಲಾಲ್​​ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಏಮ್ಸ್​​ಗೆ ಬುಧವಾರ ರಾತ್ರಿ ದಾಖಲಿಸಲಾಗಿದೆ.

Ad
300x250 2

ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಮತ್ತು ಸದ್ಯ ಅಬ್ಸರ್ವೇಷನ್​ನಲ್ಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. 96 ವರ್ಷ ವಯಸ್ಸಿನ ಅಡ್ವಾಣಿ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆದರೆ, ಅವರ ಆರೋಗ್ಯ ಸ್ಥಿತಿಯ ಕುರಿತು ಆಸ್ಪತ್ರೆಯು ಹೆಚ್ಚಿನ ವಿವರ ನೀಡಿಲ್ಲ.

ಮೂರು ತಿಂಗಳ ಹಿಂದೆಯಷ್ಟೇ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಅಡ್ವಾಣಿ ಅವರಿಗೆ ಪ್ರದಾನ ಮಾಡಲಾಗಿತ್ತು. ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರಶಸ್ತಿ ಪ್ರದಾನ ಮಾಡಿದ್ದರು.

Ad
Ad
Nk Channel Final 21 09 2023
Ad