ಮುಂಬೈ: ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ರತನ್ ಟಾಟಾ (86) ಅವರನ್ನು ಸೋಮವಾರ ಮುಂಜಾನೆ 12.30 ರಿಂದ 1 ಗಂಟೆಯ ನಡುವೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರನ್ನು ಗಂಭೀರ ಸ್ಥಿತಿಯಲ್ಲಿ ಕರೆತರಲಾಗಿದ್ದು, ಪ್ರಸ್ತುತ ಹೃದ್ರೋಗ ತಜ್ಞ ಡಾ.ಶಾರುಖ್ ಆಸ್ಪಿ ಗೋಲ್ವಾಲಾ ನೇತೃತ್ವದ ವಿಶೇಷ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

