Bengaluru 23°C
Ad

ಆರಂಭಿಕ ಹಿನ್ನಡೆ ಬಳಿಕ ವಾರಾಣಸಿಯಲ್ಲಿ ಮೋದಿ 33 ಸಾವಿರ ಮತಗಳ ಭಾರಿ ಮುನ್ನಡೆ

ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಎನ್‌ಡಿಎ ಮೈತ್ರಿಕೂಟವು ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 291ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌ 272 ದಾಟಿದೆ.

ವಾರಾಣಸಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಎನ್‌ಡಿಎ ಮೈತ್ರಿಕೂಟವು ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 291ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌ 272 ದಾಟಿದೆ.

ಇಂಡಿಯಾ ಒಕ್ಕೂಟವೂ ಎನ್‌ಡಿಎಗೆ ಸ್ಪರ್ಧೆಯೊಡ್ಡುತ್ತಿದ್ದು, 223ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾರಾಣಸಿಯಲ್ಲಿ ಭಾರಿ ಮುನ್ನಡೆಯಾಗಿದೆ.

ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 33 ಸಾವಿರ ಮತಗಳ ಮುನ್ನಡೆ ಗಳಿಸಿದ್ದರು. ಇದಕ್ಕೂ ಮೊದಲು ಮೋದಿ ಅವರಿಗೆ 6,223 ಮತಗಳ ಹಿನ್ನಡೆಯಾಗಿತ್ತು.

ಕಾಂಗ್ರೆಸ್‌ನ ಅಜಯ್‌ ರಾಯ್‌ ಅವರು ಆರಂಭಿಕ ಹಂತದ ಮತಎಣಿಕೆಯಲ್ಲಿ 11,480 ಮತಗಳನ್ನು ಪಡೆದಿದ್ದರೆ, ನರೇಂದ್ರ ಮೋದಿ ಅವರು 5,257 ಮತಗಳನ್ನಷ್ಟೇ ಪಡೆದು ಹಿನ್ನಡೆ ಅನುಭವಿಸಿದ್ದರು. ಆದರೆ, ನಂತರದ ಹಂತಗಳಲ್ಲಿ ಮೋದಿ ಅವರು ಭಾರಿ ಮುನ್ನಡೆ ಸಾಧಿಸಿದರು. ‌

 

Ad
Ad
Nk Channel Final 21 09 2023
Ad