ನವದೆಹಲಿ: ಅಗ್ನಿವೀರ್ ಯೋಜನೆಯನ್ನು ರದ್ದುಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ರಾಜ್ಯಸಭಾ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಬಿಜೆಪಿ ಅಧಿಕಾರಕ್ಕೇರಿದೆ ಎಂದು ಆಡಳಿತ ಪಕ್ಷದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
‘ಅಗ್ನಿವೀರ್‌ನಂತಹ ಯೋಜಿತವಲ್ಲದ ಮತ್ತು ‘ತುಘಲಕಿ’ ಯೋಜನೆಯನ್ನು ಜಾರಿಗೆ ತರುವ ಮೂಲಕ ಯುವಕರ ನೈತಿಕ ಸ್ಥೈರ್ಯವನ್ನು ಛಿದ್ರಗೊಳಿಸಲಾಗಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಮಲ್ಲಿಕಾರ್ಜುನ ಖರ್ಗೆ, “ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

