ಬಿಹಾರ: 2025ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧವನ್ನು ಅಂತ್ಯಗೊಳಿಸುವುದಾಗಿ ಚುನಾವಣಾ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಜನ್ ಸೂರಜ್ ಸರ್ಕಾರ ರಚನೆಯಾದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುತ್ತೇವೆ. ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಇಬ್ಬರೂ ನಾಯಕರ ಅವಧಿಯಲ್ಲಿ ಬಿಹಾರ ನಷ್ಟ ಅನುಭವಿಸಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಬಿಹಾರದ ಜನರು 30 ವರ್ಷಗಳಿಂದ ಅವರಿಬ್ಬರನ್ನೂ ನೋಡಿದ್ದಾರೆ. ನಾವು ಅವರಿಬ್ಬರನ್ನೂ ಬಿಹಾರ ತೊರೆಯುವಂತೆ ಒತ್ತಾಯಿಸುತ್ತಿದ್ದೇವೆ ಎಂದರು. ಜನ್ ಸೂರಾಜ್ ಎಲ್ಲಾ 243 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಪಕ್ಷವು ಸರ್ಕಾರ ರಚಿಸಿದ ಒಂದು ಗಂಟೆಯೊಳಗೆ ರಾಜ್ಯದಿಂದ ಮದ್ಯ ನಿಷೇಧವನ್ನು ತೆಗೆದುಹಾಕಲಾಗುವುದು ಎಂದು ಹೇಳಿದರು.
Ad