ನವದೆಹಲಿ: ಪ್ಯಾರಿಸ್ ಒಲಿಪಿಕ್ಸ್‌ನಿಂದ ಪದಕ ವಂಚಿತರಾಗಿ ಭಾರತಕ್ಕೆ ಮರಳಿದ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಹರಿಯಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ವಿನೇಶ್, ನಾನು ಕಾಂಗ್ರೆಸ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಕಷ್ಟದ ಸಮಯದಲ್ಲಿ ನಮ್ಮವರು ಯಾರೆಂದು ಗೊತ್ತಾಗುತ್ತದೆ ಎಂದು ಕೆಲವರು ಹೇಳುತ್ತಾರೆ. ಅದು ನನಗೆ ಮನದಟ್ಟಾಗಿದೆ ಎಂದಿದ್ದಾರೆ.
ಈ ಹಿಂದೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಮ್ಮನ್ನು ರಸ್ತೆಯಲ್ಲಿ ಎಳೆದಾಡಿಕೊಂಡು ಹೋಗುವಾಗ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ನಮ್ಮೊಂದಿಗಿದ್ದವು. ಇದೀಗ ನಾನು ಮಹಿಳೆಯರ ಪರವಾಗಿ ನಿಲ್ಲುವ ಹಾಗೂ ಬೀದಿಯಿಂದ ಹಿಡಿದು ಸಂಸತ್ತಿನ ವರೆಗೆ ಹೋರಾಡಲು ಸಿದ್ಧವಿರುವ ಪಕ್ಷಕ್ಕೆ ಸೇರಿರುವುದಕ್ಕೆ ಹೆಮ್ಮೆಯಿದೆ ಎಂದರು.
Ad